Friday, October 16, 2026
Homeಕ್ರೈಮ್Hassan: ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚನೆ ಆರೋಪ: ಅನ್ನಪೂರ್ಣೇಶ್ವರಿ ಗೌಡ ವಿರುದ್ಧ ನೊಂದ ಮಹಿಳೆಯರ...

Hassan: ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚನೆ ಆರೋಪ: ಅನ್ನಪೂರ್ಣೇಶ್ವರಿ ಗೌಡ ವಿರುದ್ಧ ನೊಂದ ಮಹಿಳೆಯರ ದೂರು

Telegram Group
Join Now

ಹಾಸನ: ಮಹಿಳಾಪರ ಹೋರಾಟಗಾರ್ತಿ ಎಂದು ಹೇಳಿಕೊಂಡು ದಲಿತರು ಹಾಗೂ ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವುದಾಗಿ, ಮಕ್ಕಳಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಹಲವರಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಅನ್ನಪೂರ್ಣೇಶ್ವರಿ ಗೌಡ ವಿರುದ್ಧ ಮಹಿಳೆಯರಾದ ರತ್ನಮ್ಮ ಹಾಗೂ ನೊಂದ ಸತ್ರಸ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಪ್ರಶ್ನಿಸಿದರೆ ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈವರೆಗೆ ಅವರು ಯಾವ ಮಹಿಳೆಯರಿಗೂ ನ್ಯಾಯ ಕೊಡಿಸಿಲ್ಲ. ಅವರು ಹೇಳುತ್ತಿರುವ ಮಾತುಗಳೆಲ್ಲ ಸುಳ್ಳು ಎಂದು ಆರೋಪಿಸಿದರು.

ಇತ್ತೀಚೆಗೆ ದಲಿತ ಮಹಿಳೆ ಕುಸುಮ ಅವರ ಮೇಲೆ ಅನ್ನಪೂರ್ಣೇಶ್ವರಿ ಗೌಡ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿದ್ದಾರೆ. ಈ ಸಂಬಂಧ ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದರೂ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಹಾಗೂ ಎಫ್‌ಐಆರ್ ದಾಖಲಿಸುತ್ತಿಲ್ಲ ಎಂದು ಕುಸುಮ ಅಳಲು ತೋಡಿಕೊಂಡರು.

ಅನ್ನಪೂರ್ಣೇಶ್ವರಿ ಗೌಡ ಅವರು ಮಹಿಳೆಯೊಂದಿಗೆ ವಾಗ್ವಾದ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸುವುದರ ಜತೆಗೆ ಚಪ್ಪಲಿ ಹಾಗೂ ಇತರ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ಸಂದರ್ಭದಲ್ಲಿಯೂ ದುರ್ವರ್ತನೆ ತೋರಿದ್ದಾರೆ ಎಂದು ದೂರಿದರು.

ಹಲ್ಲೆಯಿಂದ ಗಾಯಗೊಂಡ ಕುಸುಮ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯಕೀಯ-ಕಾನೂನು ವರದಿ (ಎಂಎಲ್‌ಸಿ) ಸಿದ್ಧಪಡಿಸಲಾಗಿದೆ. ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಈವರೆಗೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿದರು.

ಉದ್ಯೋಗ ಕೊಡಿಸುವುದಾಗಿ ₹2.80 ಲಕ್ಷ ಪಡೆದ ಆರೋಪ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯರು ಆರೋಪಿಸಿದರು. ಈ ಸಂಬಂಧ ತಮ್ಮ ಬಳಿ ಆಡಿಯೊ ಮತ್ತು ವಿಡಿಯೊ ಸೇರಿದಂತೆ ಕೆಲವು ಸಾಕ್ಷ್ಯಾಧಾರಗಳಿದ್ದು, ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ಯಶೋಧಮ್ಮ ಎಂಬ ಮಹಿಳೆಯ ಮಗನಿಗೆ ಹಾಸನ ಮಹಾನಗರ ಪಾಲಿಕೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ₹2.80 ಲಕ್ಷ ಪಡೆದಿದ್ದಾರೆ ಎಂಬ ಆರೋಪವನ್ನೂ ಮಾಡಿದರು. ಈ ಎಲ್ಲ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕುಸುಮಾ, ಯಶೋ್ದ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!