Saturday, October 17, 2026
Homeಗ್ರೇಟರ್ ಬೆಂಗಳೂರುAlcohol ban: ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ: ಆದೇಶ ಹಿಂಪಡೆಯುವಂತೆ ಹೋಟೆಲ್ ಮಾಲೀಕರ...

Alcohol ban: ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ: ಆದೇಶ ಹಿಂಪಡೆಯುವಂತೆ ಹೋಟೆಲ್ ಮಾಲೀಕರ ಸಂಘ ಒತ್ತಾಯ

Telegram Group
Join Now

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಘೋಷಿಸಲಾದ ‘ಡ್ರೈ ಡೇ’ ಆದೇಶವನ್ನು ಹಿಂಪಡೆಯುವಂತೆ ‘ಬೆಂಗಳೂರು ಹೋಟೆಲ್ ಮಾಲೀಕರ ಸಂಘ’  ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.

ಅಕ್ಟೋಬರ್ 13 ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ, ಅಕ್ಟೋಬರ್ 21 ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 23 ರವರೆಗೆ ಹಾಗೂ ಮತ ಎಣಿಕೆ ನಡೆಯುವ ಅಕ್ಟೋಬರ್ 27 ರಂದು ‘ಡ್ರೈ ಡೇ’ ಘೋಷಿಸಿರುವುದನ್ನು ಸಂಘವು ಉಲ್ಲೇಖಿಸಿದೆ. ಈ ನಿರ್ಬಂಧಗಳಿಂದ ಬಾರ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಲಿದ್ದು,ವ್ಯಾಪಾರ ನಷ್ಟವಾಗಲಿದೆ ಎಂದು ಸಂಘವು ತಿಳಿಸಿದೆ.

ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ -ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಕ್ಟೋಬರ್ 23 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ಕ್ಷೇತ್ರಗಳೆಂದರೆ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!