Sunday, October 18, 2026
Homeಕರ್ನಾಟಕGruhajyothi Scheme: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ಪರಿಶೀಲನೆಯ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ

Gruhajyothi Scheme: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ಪರಿಶೀಲನೆಯ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ

Telegram Group
Join Now

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನೆ ಮತ್ತು ಡಿಜಿಟಲೀಕರಣ ಪ್ರಕ್ರಿಯೆಯ ಗಡುವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ. ಮನೆ-ಮನೆ ಸಮೀಕ್ಷೆಯ ಸಮಯದಲ್ಲಿ ಗೈರುಹಾಜರಾದ ಅಥವಾ ಮನೆಗೆ ಬೀಗ ಹಾಕಿದ್ದ ಕಾರಣದಿಂದ ಪರಿಶೀಲನೆಗೆ ಸಿಗದ ಗ್ರಾಹಕರಿಗೆ ಯೋಜನೆ ಸೌಲಭ್ಯವನ್ನು ಮುಂದುವರಿಸಲು ಇದು ಕೊನೆಯ ಅವಕಾಶವಾಗಿದೆ.

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪಡಿತರ ಚೀಟಿ (ರೇಷನ್ ಕಾರ್ಡ್), ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಬಾಡಿಗೆದಾರರಾಗಿದ್ದರೆ ಬಾಡಿಗೆ ಒಪ್ಪಂದ ಪತ್ರಗಳನ್ನು ಜೊತೆಯಲ್ಲಿ ಕೊಂಡೊಯ್ಯಬೇಕು.

ಸಮೀಕ್ಷೆಯ ಸಂದರ್ಭದಲ್ಲಿ ಫಲಾನುಭವಿಗಳು ಲಭ್ಯವಿಲ್ಲದ ಕಾರಣಕ್ಕೆ ಅರ್ಹರು ಉಚಿತ ವಿದ್ಯುತ್ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮನೆಮನೆಗೆ ತೆರಳಿ ನಡೆಸುವ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಗ್ರಾಹಕರು ಅಕ್ಟೋಬರ್ 31ರೊಳಗೆ ಸಂಬಂಧಪಟ್ಟ ಕಚೇರಿಗಳಿಗೆ ತೆರಳಿ ದಾಖಲೆ ಪರಿಶೀಲನೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!