Sunday, October 18, 2026
Homeಜಿಲ್ಲಾಸುದ್ದಿChickmagalore: ರಸ್ತೆ ಮಧ್ಯದಲ್ಲೇ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು: ವಾಹನ ಸವಾರರ ಪರದಾಟ!

Chickmagalore: ರಸ್ತೆ ಮಧ್ಯದಲ್ಲೇ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು: ವಾಹನ ಸವಾರರ ಪರದಾಟ!

Telegram Group
Join Now

ಚಿಕ್ಕಮಗಳೂರು: ಮಲೆನಾಡಿನ ಭಾಗಗಳಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚಾಗುತ್ತಿದ್ದು, ಇದೀಗ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕಂಚಿನಕಲ್ ದುರ್ಗ ಬಳಿ ನಾಲ್ಕು ಕಾಡುಕೋಣಗಳು ರಸ್ತೆ ದಾಟಿ ಅರಣ್ಯ ಪ್ರದೇಶಕ್ಕೆ ತೆರಳಿರುವ ಘಟನೆ ನಡೆದಿದೆ.

ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಾಣಿಸಿಕೊಂಡಿದ್ದು, ನಾಲ್ಕು ಕಾಡುಕೋಣಗಳು ರಸ್ತೆ ದಾಟಿ ಕಾಡಿನೊಳಗೆ ಸೇರುವ ದೃಶ್ಯವನ್ನು ವಾಹನ ಸವಾರರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದಾರೆ. ಆಲ್ದೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಏಕಾಏಕಿ ಕಾಡುಕೋಣಗಳು ಕಾಣಿಸಿಕೊಂಡಿರುವುದು ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಕಾಡುಕೋಣಗಳು ರಸ್ತೆ ದಾಟುವ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ಅಪಾಯ ಉಂಟಾಗುವ ಸಾಧ್ಯತೆಯೂ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.

ಮಲೆನಾಡಿನ ಗ್ರಾಮೀಣ ಪ್ರದೇಶಗಳು ಹಾಗೂ ರಸ್ತೆ ಮಾರ್ಗಗಳಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!