Tuesday, October 20, 2026
Homeಕ್ರೈಮ್ಚಿಕ್ಕಮಗಳೂರು: ಸಾಲದ ಹೊರೆಗೆ ಹೆದರಿ ಭದ್ರಾ ನಾಲೆಗೆ ಹಾರಿ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲದ ಹೊರೆಗೆ ಹೆದರಿ ಭದ್ರಾ ನಾಲೆಗೆ ಹಾರಿ ರೈತ ಆತ್ಮಹತ್ಯೆ

Telegram Group
Join Now

ಚಿಕ್ಕಮಗಳೂರು: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಬೆಳೆ ನಷ್ಟ ಹಾಗೂ ಸಾಲದ ಹೊರೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ನಡುವೆ, ಅಜ್ಜಂಪುರ ತಾಲೂಕಿನಲ್ಲಿ 38 ವರ್ಷದ ರೈತರೊಬ್ಬರು ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಗ್ರಾಮದ ನಿವಾಸಿ ಸುನೀಲ್ (38) ಎಂದು ಗುರುತಿಸಲಾಗಿದೆ. ತಾಲೂಕಿನ ಹುಣಸಘಟ್ಟ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.

ಸುನೀಲ್ ಅವರು ತಮ್ಮ ತೋಟದಲ್ಲಿ ಅಡಿಕೆ ಬೆಳೆ ಬೆಳೆಯಲು ವಿವಿಧ ಬ್ಯಾಂಕ್‌ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಂದ ₹10 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು ಎನ್ನಲಾಗಿದೆ. ಆದರೆ, ಈ ಬಾರಿ ಮಳೆಯ ಕೊರತೆಯಿಂದ ಅಡಿಕೆ ತೋಟದ ಬೆಳೆ ತೀವ್ರ ಹಾನಿಗೊಳಗಾಗಿದ್ದು, ತೋಟವನ್ನು ಉಳಿಸಿಕೊಳ್ಳಲು ಅವರು ಸಾಕಷ್ಟು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಮಳೆಯ ಅಭಾವದಿಂದ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಕೈಕೊಟ್ಟ ಪರಿಣಾಮ ಆದಾಯ ಕುಂಠಿತಗೊಂಡಿತ್ತು. ಮತ್ತೊಂದೆಡೆ, ಪಡೆದಿದ್ದ ಸಾಲವನ್ನು ಮರುಪಾವತಿಸುವ ಚಿಂತೆಯೂ ಅವರನ್ನು ಕಾಡುತ್ತಿತ್ತು ಎನ್ನಲಾಗಿದೆ. ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟದಿಂದ ಅವರು ತೀವ್ರವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!