Tuesday, October 20, 2026
Homeಜಿಲ್ಲಾಸುದ್ದಿಕಾಫಿನಾಡಿನ ಚಿಕ್ಕಮಗಳೂರಲ್ಲಿ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ!

ಕಾಫಿನಾಡಿನ ಚಿಕ್ಕಮಗಳೂರಲ್ಲಿ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ!

Telegram Group
Join Now

ಚಿಕ್ಕಮಗಳೂರು: ಕಾಫಿನಾಡಿನ ನಗರವಾಸಿಗಳಿಗೆ ಮುಂದಿನ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ.

ನಗರಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಜೀವನಾಡಿಯಂತಿರುವ 600 ಎಂಎಂ ಸಾಮರ್ಥ್ಯದ ಮುಖ್ಯ ಕೊಳವೆ ಮಾರ್ಗವು ಎ. ಐ.ಟಿ ಸರ್ಕಲ್ ಸಮೀಪ ಒಡೆದು ಹೋಗಿದ್ದು, ಇದರ ತುರ್ತು ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 22 ರಿಂದ 24 ರವರೆಗೆ ಸತತ ಮೂರು ದಿನಗಳ ಕಾಲ ನಗರದೆಲ್ಲೆಡೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು ಈ ದಿನಗಳಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಮನಗಂಡು, ಮುಂಚಿತವಾಗಿಯೇ ಅಗತ್ಯ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಮಿತವಾಗಿ ಬಳಸಬೇಕು ಹಾಗೂ ದುರಸ್ತಿ ಕಾರ್ಯಕ್ಕೆ ನಗರಸಭೆಯೊಂದಿಗೆ ಕೈಜೋಡಿಸಿ ಸಹಕರಿಸಬೇಕೆಂದು ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!