ಚಿಕ್ಕಮಗಳೂರು: ನಿವೇಶನ ರಹಿತರಿಗೆ ಗುಡಿಸಲು ಹಾಕಲು ಬಿಡದ ಅರಣ್ಯ ಇಲಾಖೆ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾಚಗೊಂಡನಹಳ್ಳಿಯ ತೋಳೂರು ಗುಡ್ಡದಲ್ಲಿ ಡಿಮ್ಡ್ ಫಾರೆಸ್ಟ್ ಹೆಸರಿನಲ್ಲಿ ನಿವೇಶನ ನೀಡಲು ತಡೆಹಿಡಿದಿದ್ದು, ಅದೇ ಜಾಗದಲ್ಲಿ ಪ್ರಭಾವಿಗಳು ಮರ ಕಡಿದು ಕಾಫಿ ತೋಟ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಡವರಿಗೆ ಒಂದು ನ್ಯಾಯ, ಪ್ರಭಾವಿಗಳಿಗೆ ಮತ್ತೊಂದು ನ್ಯಾಯವೇ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಅಕ್ರಮವಾಗಿ ಮರ ಕಡಿದು ಕಾಫಿ ಗಿಡ ನೆಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
