ಶೃಂಗೇರಿ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, 32 ವರ್ಷದ ನಾಗರಾಜ್ ಎಂಬುವವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆ ಮಧ್ಯೆಯೇ ಹೊತ್ತಿ ಉರಿದಿದ್ದು, ಬೆಂಕಿ ಬೈಕ್ ಸವಾರನಿಗೂ ವ್ಯಾಪಿಸಿದೆ. ಪರಿಣಾಮ ನಾಗರಾಜ್ ಅವರು ಬೆಂಕಿಯಲ್ಲಿ ಗಂಭೀರವಾಗಿ ಸುಟ್ಟು ಮೃತಪಟ್ಟಿದ್ದಾರೆ. ಮೃತ ನಾಗರಾಜ್ ಅವರು ಶೃಂಗೇರಿ ತಾಲೂಕಿನ ಕುಂಚೇಬೈಲು ನಿವಾಸಿಯಾಗಿದ್ದು, ಕೇವಲ ಐದು ದಿನಗಳ ಹಿಂದಷ್ಟೇ ವಿವಾಹವಾಗಿದ್ದರು. ಜಯಪುರದಿಂದ ಶೃಂಗೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಅಪಘಾತದ ಬಳಿಕ ರಸ್ತೆ ಬದಿಯ ಕಂದಕಕ್ಕೆ ಇಳಿದಿದೆ.
ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
