Tuesday, October 27, 2026
Homeಜಿಲ್ಲಾಸುದ್ದಿರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ಚಿನ್ನದ ಪದಕ ಗೆದ್ದ ಚಿನ್ನಿಗ ಗ್ರಾಮದ ಚೇತನ್‌

ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ಚಿನ್ನದ ಪದಕ ಗೆದ್ದ ಚಿನ್ನಿಗ ಗ್ರಾಮದ ಚೇತನ್‌

Telegram Group
Join Now

ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮದ ಚೇತನ್ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ಚಿನ್ನಿಗ ಗ್ರಾಮದ ಗೀತಾ ಮತ್ತು ಉದಯ ದಂಪತಿಯ ಪುತ್ರ ಚೇತನ್, ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ವಿದ್ಯಾಭಾರತಿ ಸಂಸ್ಥೆ ಹಾಗೂ ಶಾಲಾ ಕ್ರೀಡಾ ಒಕ್ಕೂಟದ (ಎಸ್‌ಜಿಎಫ್‌ಐ) ವತಿಯಿಂದ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಮಂಗಳೂರಿನ ಕೈರಂಗಳದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಚೇತನ್ ಅವರ ಕ್ರೀಡಾ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಗ್ರಾಮೀಣ ಪ್ರತಿಭೆಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವ ಚೇತನ್ ಅವರ ಯಶಸ್ಸು ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!