Tuesday, October 27, 2026
Homeಜಿಲ್ಲಾಸುದ್ದಿಹರಿಹರಪುರ ಹೋಬಳಿಯಲ್ಲಿ ಶಾಸಕರಿಂದ 30 ಕೋಟಿಗೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ

ಹರಿಹರಪುರ ಹೋಬಳಿಯಲ್ಲಿ ಶಾಸಕರಿಂದ 30 ಕೋಟಿಗೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ

Telegram Group
Join Now

ಕೊಪ್ಪ: ತಾಲೂಕಿನ ಹರಿಹರಪುರ ಹೋಬಳಿಯಲ್ಲಿ ಸುಮಾರು 30 ಕೋಟಿಗೂ ಹೆಚ್ಚಿನ ಅನುದಾನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ಕಮ್ಮರಡಿಯಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿ,ಕಮ್ಮರಡಿಯಲ್ಲಿ 1.80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ
ಬಿ.ಸಿ.ಎಂ. ಹಾಸ್ಟೆಲ್, ಉದ್ಘಾಟಿಸಿ.ಹಾಲ್ಮೂತ್ತೂರಿನ ಕುರುಕಬಳ್ಳಿ ಸೇತುವೆ ನಿರ್ಮಾಣಕ್ಕೆ 50 ಲಕ್ಷ ಹಣ ಇರಿಸಿ ಅದರ ಗುದ್ದಲಿ ಪೂಜೆ ಕಾರ್ಯವನ್ನು ಮಾಡಲಾಯಿತು. ನಂತರಅಂಬಳಿಕೆ ರಸ್ತೆ 20 ಲಕ್ಷ ವೆಚ್ಚದಲ್ಲಿ, ಹರಿಹರಪುರ ಪಂಚಾಯಿತಿ ವ್ಯಾಪ್ತಿಯ ಕಾರ್ಬೈಲ್ ರಸ್ತೆ 20 ಲಕ್ಷ ವೆಚ್ಚದಲ್ಲಿ, ಅಸಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ವಿ.ಟಿ. ಶ್ರೀನಿವಾಸ್ ಗೌಡರು ಹಾಗೂ ಇತರರ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ 20 ಲಕ್ಷ ದಲ್ಲಿ ನಿರ್ಮಾಣ ಕಾರ್ಯಗಳಿಗೆ ಗುದ್ದಲಿ ಪೂಜೆ ನಡೆಸಿದರು.

ಅಸಗೋಡು ಪಂಚಾಯತಿ ಎಜಿಕಟ್ಟೆಯಲ್ಲಿ 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಅಂಬಲಿ ಬಿಡ್ಜ್ ಉದ್ಘಾಟನೆ ಕಾರ್ಯಕ್ರಮವೂ ನಡೆಸಿದರು.

ನಂತರ ಮಾತನಾಡಿದ ಶಾಸಕರಾದ ಟಿಡಿ ರಾಜೇಗೌಡರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ಕ್ಷೇತ್ರದ ಎಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲೂ ಶಕ್ತಿಮೀರಿ ಕೆಲಸಗಳನ್ನು ಮಾಡಿ ಶೃಂಗೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದು ಕ್ಷೇತ್ರದ ಜನರ ಸಹಕಾರ ಅಗತ್ಯವಿದೆ ಎಂದರು.
ಇಂದು ಗುದ್ದಲಿ ಪೂಜೆ ನೆರವೇರಿಸಿ ಹಲವು ಕಾಮಗಾರಿಗಳಿಗೆ ಅನುದಾನ ಕಡಿಮೆ ಆದಲ್ಲಿ ಮತ್ತಷ್ಟು ಅನುದಾನ ನೀಡಲಾಗುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಹರಿಹರಪುರ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾದ ಮಿತ್ರ, ಸುನಿಲ್ ಭಂಡಿಗಡಿ, ಸಮರ್ಥ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!