ಮೂಡಿಗೆರೆ: ಬಣಕಲ್ ಸರ್ಕಾರಿ ಜಿ.ಎಚ್.ಪಿ.ಎಸ್. ಉರ್ದು ಶಾಲೆಯ ವಿದ್ಯಾರ್ಥಿನಿ ಶಗುಪ್ತ ಫಾತಿಮಾ ಅವರು 14 ವರ್ಷದೊಳಗಿನ ಬಾಲಕಿಯರ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸರ್ಕಾರಿ ಪ್ರೌಢಶಾಲೆ, ಬಾಳೆಹೊನ್ನೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಗುಪ್ತ ಫಾತಿಮಾ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಬಣಕಲ್ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ತಾಲ್ಲೂಕಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
