ಪ್ರಜ್ವಲ ರೇವಣ್ಣ ಪ್ರಕರಣ ದೇಶಾದ್ಯಂತ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಇದೀಗ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಪ್ರಜ್ವಲ್ ರೇವಣ್ಣರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗೆ ರಕ್ಷಣೆ ಕೊಡಬೇಕು.ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಪ್ರಜ್ವಲ್ನನ್ನು ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಅನೇಕ ಮಹಿಳೆಯರನ್ನು ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೇವರಾಜೇಗೌಡ ಮೊದಲೇ ಮಾಹಿತಿ ತಿಳಿಸಿದ್ರು ಎಂಬ ವಿಚಾರ ಕೇಳಿ ನನಗೆ ಆಘಾತವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಯವರ ಗಮನಕ್ಕೆ ತಂದರೂ ಪ್ರಜ್ವಲ್ ಪರವಾಗಿ ಪ್ರಚಾರ ಮಾಡಿದ್ದು ನನಗೆ ಶಾಕ್ ಎನಿಸಿದೆ. ಪ್ರಜ್ವಲ್ ವಿದೇಶಕ್ಕೆ ಹಾರಲು ಕೇಂದ್ರ ಸರ್ಕಾರವೇ ಉದ್ದೇಶಪೂರ್ವಕವಾಗಿ ಅನುವು ಮಾಡಿಕೊಟ್ಟಿದೆ.
ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಕೂಡಾ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ. ತಾಯಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು. ಈ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ನೀಡಬೇಕು ಎಂದು ಪತ್ರದ ಮೂಲಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.