Saturday, October 31, 2026
Homeಜಿಲ್ಲಾಸುದ್ದಿನವೆಂಬರ್ 1ರಂದು ಚಿಕ್ಕಮಗಳೂರಲ್ಲಿ ವಿದ್ವತ್ ಪಿಯು ಕಾಲೇಜಿನಿಂದ SSLC ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರೀಕ್ಷೆ: ಪ್ರತಿಭಾನ್ವಿತರಿಗೆ ಲ್ಯಾಪ್...

ನವೆಂಬರ್ 1ರಂದು ಚಿಕ್ಕಮಗಳೂರಲ್ಲಿ ವಿದ್ವತ್ ಪಿಯು ಕಾಲೇಜಿನಿಂದ SSLC ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರೀಕ್ಷೆ: ಪ್ರತಿಭಾನ್ವಿತರಿಗೆ ಲ್ಯಾಪ್ ಟಾಪ್, ಟ್ಯಾಬ್, ಉಚಿತ ಶಿಕ್ಷಣದ ಉಡುಗೊರೆ

Telegram Group
Join Now

ಚಿಕ್ಕಮಗಳೂರು: ಶೈಕ್ಷಣಿಕ ಶ್ರೇಷ್ಠತೆ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ 01 ನವೆಂಬರ್ 2026 ರಂದು ಚಿಕ್ಕಮಗಳೂರಿನ *ಪ್ರೈಡ್ ಯುರೋ ಶಿಕ್ಷಣ ಸಂಸ್ಥೆಯಲ್ಲಿ (PRIDE EURO School, 4th Cross, Vijaya Nagar, Hosamane Extension, Chikkamaglur ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಿದೆ.

ವಿದ್ಯಾರ್ಥಿಗಳಲ್ಲಿರುವ ಶೈಕ್ಷಣಿಕ ಪ್ರತಿಭೆಯನ್ನು ಗುರುತಿಸಿ, ಅದನ್ನು ಪೋಷಿಸುವುದು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವಿನೊಂದಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವುದು ಈ ಪ್ರತಿಭಾ ಪರೀಕ್ಷೆಯ ಉದ್ದೇಶವಾಗಿದೆ.

ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರುವ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಇದರ ಮೂಲಕ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಸಹಕಾರಿಯಾಗಲಿದೆ.

ವಿದ್ವತ್ ಪಿಯು ಕಾಲೇಜು ತನ್ನ ಪ್ರಥಮ ಬ್ಯಾಚ್‌ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಿಸಿದೆ. KCET ಎಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ *7ನೇ ರ‍್ಯಾಂಕ್ ಹಾಗೂ ನಾಲ್ವರು ವಿದ್ಯಾರ್ಥಿಗಳಿಗೆ AIIMS ಪ್ರವೇಶ ದೊರೆತಿರುವುದು ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಜಿಲ್ಲೆಯ ಪ್ರತಿಭಾವಂತ ಮತ್ತು ಉನ್ನತ ಶಿಕ್ಷಣದ ಆಶಯ ಹೊಂದಿರುವ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳು ಈ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.

ಸ್ಥಳ: ಪ್ರೈಡ್ ಯುರೋ ಶಿಕ್ಷಣ ಸಂಸ್ಥೆ, 4 ನೇ ಅಡ್ಡ ರಸ್ತೆ, ವಿಜಯನಗರ, ಹೊಸಮನೆ ಬಡಾವಣೆ, ಚಿಕ್ಕಮಗಳೂರು. (PRIDE EURO School, 4th Cross, Vijaya Nagar, Hosamane Extension, Chikkamaglur*

ದಿನಾಂಕ: 01 ನವೆಂಬರ್ 2026
ಅರ್ಹತೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು.
ಉದ್ದೇಶ: ಪ್ರತಿಭೆ ಗುರುತಿಸುವಿಕೆ ಮತ್ತು ಸಾಧಕರಿಗೆ ಲ್ಯಾಪ್ ಟ್ಯಾಬ್ ಉಡುಗೊರೆ, ಉಚಿತ ವಿದ್ಯಾರ್ಥಿವೇತನ.
ನೋಂದಣಿ: ಉಚಿತ

ನೋಂದಣಿಗಾಗಿ ಇಂದೇ ಸಂಪರ್ಕಿಸಿ:
📞 7618775602
📞 7338138007

ಆನ್‌ಲೈನ್ ನೋಂದಣಿ:

Talent Test

ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!