ಚಿಕ್ಕಮಗಳೂರು: ದೀಪಾವಳಿ ಹಬ್ಬದ ಅಂಗವಾಗಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷಕ್ಕೊಮ್ಮೆ ನಡೆಯುವ ಪ್ರಸಿದ್ಧ ದೇವಿರಮ್ಮನವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ದೇವಸ್ಥಾನದಲ್ಲಿ ನವೆಂಬರ್ ಬೆಳಗ್ಗೆ 7 ರಂದು ಬೆಳಗ್ಗೆ ೬ ಗಂಟೆಯಿಂದ ಪೂಜಾ ವಿಧಿ ವಿಧಾನಗಳು ಆರಂಭವಾಗಿದ್ದು ಅಂದು ಬೆಳಗ್ಗೆ ೧೦ಗಂಟೆಗೆ ಕೊನೆಗೊಳ್ಳಲಿದೆ. ಆ ನಂತರ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಿದೆ.
ಹಾಗೆ ನವೆಂಬರ್ 7 ಮತ್ತು 8ರಂದು ಎರಡು ದಿನಗಳ ಕಾಲ ದರ್ಶನ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಬಾರಿ ರಾತ್ರಿ ಹೊತ್ತು ಬೆಟ್ಟ ಹತ್ತುವುದನ್ನು ನಿರ್ಬಂಧಿಸಲಾಗಿದೆ.
