Wednesday, November 4, 2026
Homeಕ್ರೈಮ್ಮೂರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: 16 ವರ್ಷದ ಬಾಲಕನ ವಿರುದ್ಧ ಕೇಸ್‌ ದಾಖಲು!

ಮೂರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: 16 ವರ್ಷದ ಬಾಲಕನ ವಿರುದ್ಧ ಕೇಸ್‌ ದಾಖಲು!

Telegram Group
Join Now

ಬಾಳೆಹೊನ್ನೂರು:  ಮೂರನೇ ತರಗತಿ ವಿದ್ಯಾರ್ಥಿನಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 16 ವರ್ಷದ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿತ ಬಾಲಕನನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

10 ವರ್ಷದ ಬಾಲಕಿ ಕಳೆದ ಎರಡು ತಿಂಗಳಿಂದ ಅನಾರೋಗ್ಯದ ಕಾರಣ ಶಾಲೆಗೆ ತೆರಳದೆ ಮನೆಯಲ್ಲೇ ಇದ್ದಳು. ಆಗಾಗ ಸುಸ್ತಾಗುತ್ತಿದೆ ಎಂದು ಹೇಳುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರು ಚಿಕಿತ್ಸೆ ನೀಡಿ ಮೂರು ವಾರಗಳ ಬಳಿಕ ಮತ್ತೆ ಬರುವಂತೆ ಸೂಚಿಸಿದ್ದರು. ಸೋಮವಾರ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರ ಸಲಹೆಯಂತೆ ರಕ್ತ ಪರೀಕ್ಷೆ ಮಾಡಿಸಿದಾಗ ಬಾಲಕಿಗೆ ಎಚ್‌ಐವಿ ಸೋಂಕು ಇರುವುದು ದೃಢಪಟ್ಟಿದೆ.ಈ ಸಂದರ್ಭದಲ್ಲಿ ವೈದ್ಯರ ಬಳಿ ಬಾಲಕಿ ನೀಡಿದ ಮಾಹಿತಿ ಆಧರಿಸಿ ಘಟನೆ ಬೆಳಕಿಗೆ ಬಂದಿದೆ.

ಸಂಬಂಧಿಯಾಗಿರುವ 16 ವರ್ಷದ ಬಾಲಕ ಕಳೆದ ಆರು ತಿಂಗಳಿಂದ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಂದು ಹಲವು ಬಾರಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಬಾಲಕಿ ತಿಳಿಸಿದ್ದಾಳೆ ಎಂದು ಆಕೆಯ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯದ ಆದೇಶದಂತೆ ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!