Sunday, November 8, 2026
Homeಜಿಲ್ಲಾಸುದ್ದಿNR Pura: ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ರೇಷನ್ ಕಿಟ್...

NR Pura: ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ರೇಷನ್ ಕಿಟ್ ವಿತರಣೆ

Telegram Group
Join Now

ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ನರಸಿಂಹರಾಜಪುರ ತಾಲೂಕಿನ ವಗಡೆಕಲ್ಲು ಸಮೀಪದ ಚಿಟ್ಟಿಕೊಡಿಗೆಯಲ್ಲಿರುವ ಸೆಂಟ್ ಬೆನೆಡಿಕ್ಟ್ಸ್ ಬೌದ್ಧಿಕ ವಿಕಲಚೇತನ ಹೆಣ್ಣುಮಕ್ಕಳ ಆಶ್ರಯ ಕೇಂದ್ರದಲ್ಲಿ ರೇಷನ್ ಕಿಟ್‌ಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಹುಟ್ಟುಹಬ್ಬದಂತಹ ವಿಶೇಷ ದಿನಗಳನ್ನು ಕೇವಲ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜದ ಅಗತ್ಯವಿರುವವರಿಗೆ ನೆರವಾಗುವ ಮೂಲಕ ಆಚರಿಸಬೇಕು. ಬಿ.ವಿ. ಶ್ರೀನಿವಾಸ್ ಅವರು ತಮ್ಮ ಸಾರ್ವಜನಿಕ ಜೀವನದಲ್ಲಿ ಸೇವೆ ಮತ್ತು ಸಂಘಟನೆಯ ಮೂಲಕ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಜನ್ಮದಿನದ ನೆನಪಿನಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮ ಮಾಡಲು ನಮಗೆ ಸಂತೋಷವಾಗಿದೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು ಬಿ.ವಿ. ಶ್ರೀನಿವಾಸ್ ಅವರು ಕೇವಲ ರಾಜಕೀಯ ನಾಯಕರಲ್ಲ, ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ಧಾವಿಸುವ ಸೇವಾಮನೋಭಾವದ ನಾಯಕರು. ಕೋವಿಡ್ ಸಂದರ್ಭದಲ್ಲಿ ದೇಶಾದ್ಯಂತ ಆಕ್ಸಿಜನ್, ಆಸ್ಪತ್ರೆ ಬೆಡ್, ಔಷಧಿ ಸೇರಿದಂತೆ ಅಗತ್ಯ ನೆರವು ಒದಗಿಸುವಲ್ಲಿ ಮುಂಚೂಣಿಯಲ್ಲಿ ನಿಂತಿದ್ದರಿಂದ ಅವರು ಆಕ್ಸಿಜನ್ ಮ್ಯಾನ್ ಆಫ್ ಇಂಡಿಯಾ ಎಂದೇ ಗುರುತಿಸಿಕೊಂಡಿದ್ದಾರೆ. ಅದೇ ರೀತಿ ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾಗೂ ನೆರೆಯ ರಾಷ್ಟ್ರ ನೇಪಾಳದಲ್ಲಿ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳದ ತಂಡಗಳನ್ನು ಸಂಘಟಿಸಿ ಪರಿಹಾರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಅವರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದರು

ಈ ಸಂದರ್ಭದಲ್ಲಿ ಮಾತನಾಡಿದ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ ಅವರು, ಯುವ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಹಾಗೂ ಪ್ರಸ್ತುತ ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನವನ್ನು ಸಮಾಜಮುಖಿ ಕಾರ್ಯದ ಮೂಲಕ ಆಚರಿಸುತ್ತಿರುವುದು ಸಂತೋಷದ ವಿಚಾರವಾಗಿದೆ. ನಾಯಕರು ಎಂದರೆ ಕೇವಲ ಹುದ್ದೆ ಮತ್ತು ಅಧಿಕಾರಕ್ಕೆ ಸೀಮಿತವಾಗದೆ, ಸಮಾಜದ ಸಂಕಷ್ಟದಲ್ಲಿರುವವರ ಜೊತೆ ನಿಂತು ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿ.ವಿ. ಶ್ರೀನಿವಾಸ್ ಅವರು ದೇಶಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಜನರಿಗೆ ನೆರವಾದ ರೀತಿ ಇಂದಿಗೂ ಯುವ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದರು.

ಹುಟ್ಟುಹಬ್ಬದ ಆಚರಣೆಯನ್ನು ಕೇವಲ ಕೇಕ್ ಕತ್ತರಿಸುವುದು, ಹಾರ ಹಾಕುವುದು ಮತ್ತು ಸಂಭ್ರಮಿಸುವುದಕ್ಕೆ ಸೀಮಿತಗೊಳಿಸದೆ, ಸಮಾಜದ ವಿಶೇಷ ಆರೈಕೆಯ ಅಗತ್ಯವಿರುವ ಹೆಣ್ಣುಮಕ್ಕಳ ಆಶ್ರಯ ಕೇಂದ್ರಕ್ಕೆ ರೇಷನ್ ಕಿಟ್ ವಿತರಿಸುವ ಮೂಲಕ ಮಾನವೀಯ ಸೇವೆಗೆ ಆದ್ಯತೆ ನೀಡಿದ್ದೇವೆ. ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸಹಾಯ ಮಾಡುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಉಳಿಸಲು ಸಾಧ್ಯ. ಮುಂದಿನ ದಿನಗಳಲ್ಲಿಯೂ ಯುವ ಕಾಂಗ್ರೆಸ್ ವತಿಯಿಂದ ಇಂತಹ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಾನಂದ, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿಲಾಶ್ ಎಂ.ಪಿ., ನರಸಿಂಹರಾಜಪುರ ಪಟ್ಟಣ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮನೋಹರ್, ಗುಬ್ಬಿಗ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಅಧ್ಯಕ್ಷರಾದ ಆದರ್ಶ ಗೌಡ, ಯುವ ಮುಖಂಡರಾದ ಸಲಿಂ ತಂಬಿ, ನಂದನ್ ಸೇರಿದಂತೆ ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!