ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅರೆಸ್ಟ್ ಆದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ನೀಡಿದ್ದ ಸಂತ್ರಸ್ತೆಯನ್ನೇ ರೇವಣ್ಣ ಕಿಡ್ನ್ಯಾಪ್ ಮಾಡಿದ್ದಾರೆಂಬ ದೂರಿನ ಹಿನ್ನೆಲೆ ರೇವಣ್ಣರನ್ನು ಅರೆಸ್ಟ್ ಮಾಡಲಾಗಿದೆ. ಇಂದು ಸಂಜೆ ದೇವೇಗೌಡರ ಮನೆಯಲ್ಲೇ ರೇವಣ್ಣರನ್ನ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಬಂಧಿಸಿದ್ದಾರೆ. ಇಂದು ರಾತ್ರಿ ಇಡೀ ರೇವಣ್ಣರನ್ನ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ಅತ್ತ ರೇವಣ್ಣ ಬಂಧನವಾಗ್ತಿದ್ದಂತೆ ಇತ್ತ ಕುಮಾರಸ್ವಾಮಿ ಜೆಡಿಎಸ್ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡುವ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗ್ತಿದೆ. ರೇವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರ ತಪ್ಪಿಸಲು ಅವರನ್ನು ಅಮಾನತು ಮಾಡುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.