Tuesday, November 10, 2026
Homeಜಿಲ್ಲಾಸುದ್ದಿಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆ ದಿನ: ನಾಳೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್!

ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆ ದಿನ: ನಾಳೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್!

Telegram Group
Join Now

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ಶಕ್ತಿದೇವತೆ ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಕಡೆಯ ದಿನವಾಗಿದೆ. ದೀಪಾವಳಿ ಹಬ್ಬ ದಿನವಾದ್ದರಿಂದ ನಾಳೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಬುಧವಾರ ಮಧ್ಯಾಹ್ನ 12 ಗಂಟೆ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ಇತಿಹಾಸ ನಿರ್ಮಿಸಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿ ದರ್ಶನ ಪಡೆದಿದ್ದರೆ, ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ಕೋಟಿ ಕೋಟಿ ಆದಾಯ ಸಂಗ್ರಹವಾಗಿದೆ.

ಹಾಸನಾಂಬ ದೇವಿ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ತಾಯಿ ದರ್ಶನದ ಕೊನೆ ದಿನವಾದ ಹಿನ್ನೆಲೆ ಭಕ್ತರು ಸಾಗರೋಪಾದಿಯಲ್ಲಿ ಹರಿದುಬರುವ ಸಾಧ್ಯತೆ ದಟ್ಟವಾಗಿದೆ. ಕೊನೆ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬಹುದು. ಈ ಬಾರಿ ದೇವಿ ದರ್ಶನವನ್ನ ಪಡೆದಿದುವ ಭಕ್ತರ ಸಂಖ್ಯೆ ಗಮನಿಸಿದರೆ ದೇವಿ ದರ್ಶನದ ಕಡೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಭಕ್ತ ಮಹಾಸಾಗರ ಹರಿದು ಬರುವ ಸಾಧ್ಯತೆ ಇದೆ. ದರ್ಶನ ವಿಳಂಬಾದರು ಬರುವ ಎಲ್ಲಾ ಭಕ್ತರಿಗೂ ದೇವಿ ದರ್ಶನ ಸಿಗಲಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿರಂತರ 11 ಗಂಟೆಗಳ ಕಾಲ ಹಾಸನಾಂಬ ದೇವಿ ದರ್ಶನ ಇರಲಿದೆ. ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಈ ವೇಳೆ ಭಕ್ತರು ಸರತಿ ಸಾಲಿನಲ್ಲಿ ಕಾಲ ಕಳೆಯಬೇಕಿದೆ. ಮಧ್ಯರಾತ್ರಿ 1 ಗಂಟೆಯಿಂದ ಬುಧವಾರ ಬೆ.7 ಗಂಟೆಯವರೆಗೆ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುತ್ತದೆ. ನಾಳೆಯೂ ಬೆ.8 ಗಂಟೆಯಿಂದ ಬೆ.10 ಗಂಟೆಯವರೆಗೆ ಗೋಲ್ಡ್ ಪಾಸ್‌ನಲ್ಲಿ ಬರುವವರಿಗೆ, ಬೆ.10.30 ರಿಂದ ಮ.12 30 ರವರೆಗೆ ಪ್ರೋಟೋಕಾಲ್‌ನಲ್ಲಿ ಬರುವ ವಿವಿಧ ಕ್ಷೇತ್ರದ ಗಣ್ಯರಿಗೆ ಹಾಸನಾಂಬ ದೇವಿ ದರ್ಶನಕ್ಕೆ ಅವಕಾವಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!