ಹಾಸನ: ಕಳೆದ 11 ದಿನಗಳ ಅವಧಿಯಲ್ಲಿ ರಾಜ್ಯದ ನಾನಾ ಕಡೆಗಳಿಂದ ಆಗಮಿಸಿ 30 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಇಂದು ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ.
ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಇತಿಹಾಸ ಬರೆದಿದೆ. ಅ.30 ರಿಂದ ನ.11 ರ ಬೆಳಗ್ಗೆ 6 ಗಂಟೆಯವರೆಗೆ 30 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. 1000 ರೂ., 300 ರೂ.ನ ವಿಶೇಷ ದರ್ಶನದ ಟಿಕೆಟ್ ಮಾರಾಟ ಹಾಗೂ ಲಾಡು ಮಾರಾಟದಿಂದ 25.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
ಒಟ್ಟಾರೆಯಾಗಿ ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ನೇರ ದರ್ಶನದ ಪಾಸ್ಗಳು ಹಾಗೂ ಪ್ರಸಾದ ಮಾರಾಟದಿಂದಲೇ ದೇವಾಲಯದ ಬೊಕ್ಕಸಕ್ಕೆ ದಾಖಲೆಯ ಆದಾಯ ಹರಿದುಬಂದಿದೆ.
