Friday, November 13, 2026
Homeಗ್ರೇಟರ್ ಬೆಂಗಳೂರುModi In Bangalore: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ: ಸಿಎಂ ಡಿಕೆಶಿಯಿಂದ ಹೂಗುಚ್ಛ ನೀಡಿ...

Modi In Bangalore: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ: ಸಿಎಂ ಡಿಕೆಶಿಯಿಂದ ಹೂಗುಚ್ಛ ನೀಡಿ ಸ್ವಾಗತ!

Telegram Group
Join Now

ಬೆಂಗಳೂರು: ರಾಜ್ಯದಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಲ್ಲಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನ ಸಿಎಂ ಡಿಕೆ ಶಿವಕುಮಾರ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಪಾಲರು ಸೇರಿದಂತೆ ಗಣ್ಯರು ಸ್ವಾಗತಿಸಿದ್ದಾರೆ. ಪ್ರಧಾನಿಗಳಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಜಿಗಣಿ ಬಳಿಯಿರುವ ಪ್ರಶಾಂತಿ ಕುಟೀರ ಆಶ್ರಮದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಭದ್ರತೆಯನ್ನು ಕಟ್ಟುನಿಟ್ಟಿಗೊಳಿಸಲಾಗಿದ್ದು, ಕೇವಲ ಪಾಸ್ ಹಾಗೂ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಗಣ್ಯರಿಗೆ ಮಾತ್ರ ಒಳಹೋಗಲು ಅನುಮತಿ ನೀಡಲಾಗಿದೆ.

ಈ ಸಮಾರಂಭದಲ್ಲಿ ರಾಜ್ಯಪಾಲೆ ಡಾ. ಸುಧಾ ಯಾದವ್, ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ಎಸ್-ವ್ಯಾಸ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ. ಎಚ್.ಆರ್. ನಾಗೇಂದ್ರ ಅವರು ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!