Wednesday, September 23, 2026
Homeಕ್ರೈಮ್ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಸಂತ್ರಸ್ತರಿಗಾಗಿ ಸಹಾಯವಾಣಿ‌ ತೆರೆದ ಎಸ್ ಐಟಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಸಂತ್ರಸ್ತರಿಗಾಗಿ ಸಹಾಯವಾಣಿ‌ ತೆರೆದ ಎಸ್ ಐಟಿ

Telegram Group
Join Now

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥರ ನೆರವಿಗಾಗಿ ವಿಶೇಷ ತನಿಖಾ ತಂಡ ಸಹಾಯವಾಣಿಯನ್ನು ರಚಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಸಂತ್ರಸ್ತರಿಗೆ ಕಾನೂನಿನ ನೆರವು, ರಕ್ಷಣೆ ಹಾಗೂ ಇತರ ಯಾವುದೇ ಸಹಾಯ ಬೇಕಾದಲ್ಲಿ ಸಹಾಯವಾಣಿಗೆ ಕರೆ ಮಾಡುವಂತೆ ಎಸ್ಐಟಿ ಮುಖ್ಯಸ್ಥರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

6360938947 ಸಂಖ್ಯೆಯ ಸಹಾಯವಾಣಿಯನ್ನು ಎಸ್ ಐಟಿ ರಚಿಸಿದ್ದು, ಸಂತ್ರಸ್ತರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡ ಭರವಸೆ ನೀಡಿದೆ.

ಈ ವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಂತ್ರಸ್ತೆಯರು ಮಾತ್ರ ದೂರು ಸಲ್ಲಿಸಿದ್ದು ಉಳಿದಂತೆ ಯಾರೂ ದೂರು ನೀಡಲು ಮುಂದಾಗಿಲ್ಲ. ಸಂತ್ರಸ್ತ ಮಹಿಳೆಯರನ್ನು ಸಂಪರ್ಕಿಸಲು ಎಸ್ ಐಟಿ ಅಧಿಕಾರಿಗಳು ಕೂಡಾ ಪ್ರಯತ್ನದಲ್ಲಿದ್ದು, ಈ ಹಿನ್ನೆಲೆಯಲ್ಲಿ ಸಹಾಯವಾಣಿ ರಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!