Thursday, November 19, 2026
Homeಕರ್ನಾಟಕRice Price Down:ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೊಂಚ ರಿಲೀಫ್ :‌ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ...

Rice Price Down:ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೊಂಚ ರಿಲೀಫ್ :‌ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ದಿಢೀರ್‌ ಇಳಿಕೆ!

Telegram Group
Join Now

ಬೆಂಗಳೂರು: ಅಕ್ಕಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇದೀಗ ಕೊಂಚ ನಿರಾಳತೆ ಸಿಕ್ಕಿದೆ.ಭತ್ತದ ಪೂರೈಕೆ ಕುಸಿದಿದ್ದರಿಂದ ಕಳೆದ ಕೆಲವು ದಿನಗಳಿಂದ ಅಕ್ಕಿ ಬೆಲೆ ಏರಿಕೆಯಾಗಿತ್ತು. ಆದರೆ, ಇದೀಗ ಮಹಾರಾಷ್ಟ್ರ ಮತ್ತು ತೆಲಂಗಾಣದಿಂದ ಭತ್ತದ ಪೂರೈಕೆ ಹೆಚ್ಚಾಗಿದೆ. ಭತ್ತದ ಕಟಾವು ಪೂರ್ಣಗೊಂಡು ಮಿಲ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬರುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ದರ ಇಳಿಕೆಯಾಗಿದೆ.

ಮಾರುಕಟ್ಟೆಯಲ್ಲಿ ಹೊಸ ಸೋನಾ ಮಸೂರಿ ಅಕ್ಕಿ ದರದಲ್ಲಿ ಭಾರೀ ಇಳಿಕೆಯಾಗಿದೆ. ಈ ಹಿಂದೆ ಕೆಜಿಗೆ ₹80ರಿಂದ ₹90ರ ವರೆಗೆ ಮಾರಾಟವಾಗುತ್ತಿದ್ದ ಅಕ್ಕಿ ಬೆಲೆ ಇದೀಗ ₹65ರಿಂದ ₹70ಕ್ಕೆ ಇಳಿಕೆಯಾಗಿದೆ. ಅಂದರೆ, ಪ್ರತಿ ಕೆಜಿಗೆ ಸುಮಾರು ₹10ರಿಂದ ₹20ರವರೆಗೆ ದರ ಕಡಿಮೆಯಾಗಿದೆ.

ತುಂಗಭದ್ರಾ ನದಿ ಪಾತ್ರದಲ್ಲಿ ಭತ್ತದ ಪ್ರಮಾಣ ಕಡಿಮೆಯಿದ್ದರೂ, ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗಿದೆ. ಇದೀಗ ಕಟಾವು ಮುಗಿದಿರುವುದರಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಪೂರೈಕೆಯಾಗುತ್ತಿದೆ. ಇದರಿಂದ ಅಕ್ಕಿ ದರ ಇಳಿಕೆಯಾಗಿದೆ ಎಂದು ವಿವರಿಸಿದ್ದಾರೆ.

ಇದೇ ವೇಳೆ, ಸರ್ಕಾರ ಅಕ್ಕಿ ದಾಸ್ತಾನು ಮಿತಿಯನ್ನು ಕಡಿಮೆ ಮಾಡಿದರೆ ಅಕ್ಕಿ ಗಿರಣಿಗಳಿಗೂ ಸಮಸ್ಯೆಯಾಗಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಮತ್ತೆ ಅಕ್ಕಿ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಾವಿತ್ರಿ ಪುರುಷೋತ್ತಮ ಎಚ್ಚರಿಸಿದ್ದಾರೆ. ಹೀಗಾಗಿ ಸರ್ಕಾರ ಸ್ಟಾಕ್ ಲಿಮಿಟ್ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!