ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಎಂದಿದ್ದಾರೆ.
ಇನ್ನು ಇಂದು ದುಬೈನಿಂದ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿ, ಎಸ್ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೇ ಈವರೆಗೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದರ ನಡುವೆ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳಿಂದ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.