ಮೂಡಿಗೆರೆ: ಕೃಷ್ಣೇಗೌಡ ಎಂಬುವರಿಗೆ ಸೇರಿದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯಲ್ಲಿ ನಡೆದಿದೆ.
ಸತ್ಯ ಎಂಬುವರಿಗೆ ಕಾಡುಕೋಣ ತಿವಿದು ಬೆನ್ನು, ಕಾಲು, ಕೈ ತೀವ್ರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ
ಕಾಡುಕೋಣ ದಾಳಿ ನಡೆಸಿದಾಗ ಅನೇಕ ಕಾರ್ಮಿಕರು ಭಯಭೀತರಾಗಿ ಸ್ಥಳದಿಂದ ಓಡಿ ಪರಾರಿಯಾಗಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇತ್ತೀಚಿಗೆ ತಾಲೂಕಿನಲ್ಲಿ ಕಾಡುಕೋಣಗಳ ಕಾಟ ಹೆಚ್ಚಾಗಿದ್ದು ಬೇರೆ ಕಡೆಗೆ ಓಡಿಸಲು ಕ್ರಮವಹಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
