Friday, November 20, 2026
Homeಕರ್ನಾಟಕAsha Workers Protest: ಸಿಎಂ ಸಂಧಾನಕ್ಕೂ ಜಗ್ಗದ ಆಶಾ ಕಾರ್ಯಕರ್ತರ ಹೋರಾಟ: ಲಿಖಿತ ಭರವಸೆ ನೀಡುವವರೆಗೂ...

Asha Workers Protest: ಸಿಎಂ ಸಂಧಾನಕ್ಕೂ ಜಗ್ಗದ ಆಶಾ ಕಾರ್ಯಕರ್ತರ ಹೋರಾಟ: ಲಿಖಿತ ಭರವಸೆ ನೀಡುವವರೆಗೂ ಧರಣಿ ಕೈ ಬಿಡಲ್ಲ!

Telegram Group
Join Now

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ತಲುಪಿದೆ. ಮುಖ್ಯಮಂತ್ರಿಗಳು ಲಿಖಿತ ಭರವಸೆ ನೀಡುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

15,000 ರೂಪಾಯಿ ಗೌರವಧನ ಹೆಚ್ಚಳವೇ ಅವರ ಪ್ರಮುಖ ಬೇಡಿಕೆಯಾಗಿದೆ. ಕೊರೆಯುವ ಚಳಿಯಲ್ಲಿ, ಪುಟ್ಟ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರು ರಸ್ತೆಯನ್ನೇ ಹಾಸಿಗೆ ಮಾಡಿಕೊಂಡು, ಚಳಿಯಲ್ಲಿ ಮಕ್ಕಳನ್ನು ಎದೆಗಪ್ಪಿಕೊಂಡು ಮಲಗುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದು, ಆರ್ಥಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೋರಿದ್ದಾರೆ. ಪ್ರೋತ್ಸಾಹ ಧನ ಸೇರಿದಂತೆ 8 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದಿರುವ ಸಿಎಂ, ಬೇಡಿಕೆಗಳ ಬಗ್ಗೆ ಒಂದೇ ದಿನದಲ್ಲಿ ತೀರ್ಮಾನಿಸಲು ಸಾಧ್ಯವಿಲ್ಲ ಮುಖ್ಯಮಂತ್ರಿಗಳು ಲಿಖಿತ ಭರವಸೆ ನೀಡುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!