ಮೂಡಿಗೆರೆ: ಕಾಫಿನಾಡು ಮೂಡಿಗೆರೆಗೆ ಬೇಲೂರು ಭಾಗದಿಂದ 40ಕ್ಕೂ ಹೆಚ್ಚು ಕಾಡಾನೆಗಳು ಲಗ್ಗೆಯಿಟ್ಟ ಕಾರಣ ಇಲ್ಲಿನ ಜರು ಭಾರೀ ಆಖ್ರೋಶಗೊಂಡಿದ್ದು ಈ ಹಿನ್ನೆಲೆಯಲ್ಲಿ ಇಂದು ಮೂಡಿಗೆರೆ ಬಂದ್‌ಗೆ ಕರೆ ನೀಡಲಾಗಿದೆ.
ಹಾಸನದಿಂದ ಚಿಕ್ಕಮಗಳೂರು ಜಿಲ್ಲೆಗೆ ಕಾಡಾನೆಗಳನ್ನು ಸ್ಥಳಾಂತರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ಭುಗಿಲೆದ್ದಿದೆ. ತತ್ಕೋಳ ಅರಣ್ಯದ ಮೂಲಕ ಕಾಡಾನೆಗಳ ಸ್ಥಳಾಂತರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂಡಿಗೆರೆ ಬಂದ್ ಇರಲಿದ್ದು, ಹಲವು ಖಾಸಗಿ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ. ಸ್ವಯಂಪ್ರೇರಿತರಾಗಿ ಎಲ್ಲರೂ ಈ ಬಂದ್‌ಗೆ ಬೆಂಬಲ ನೀಡುತ್ತಿದ್ದಾರೆ.
