Saturday, November 28, 2026
Homeಜಿಲ್ಲಾಸುದ್ದಿಮೂಡಿಗೆರೆ: ಕಾಡಾನೆಗಳ ಹಾವಳಿಗೆ ರೋಸಿಹೋದ ರೈತರು: ಇಂದಿನಿಂದ ಅಹೋರಾತ್ರಿ ಧರಣಿ!

ಮೂಡಿಗೆರೆ: ಕಾಡಾನೆಗಳ ಹಾವಳಿಗೆ ರೋಸಿಹೋದ ರೈತರು: ಇಂದಿನಿಂದ ಅಹೋರಾತ್ರಿ ಧರಣಿ!

Telegram Group
Join Now

ಮೂಡಿಗೆರೆ: ಕಾಡಾನೆಗಳ ನಿರಂತರ ಹಾವಳಿ ಹಾಗೂ ಅವೈಜ್ಞಾನಿಕ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿ ಮಲೆನಾಡಿನ ರೈತರ ತಾಳ್ಮೆಯ ಕಟ್ಟೆ ಒಡೆದಿದ್ದು, ಇಂದಿನಿಂದ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿಯಲ್ಲಿ ಬೃಹತ್ ಅಹೋರಾತ್ರಿ ಧರಣಿ ಆರಂಭವಾಗಲಿದೆ.

ಮಾಕೋನಹಳ್ಳಿ ಹಾಗೂ ನಂದಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ರೈತರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದು, ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರು ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಬೇಲೂರು ಭಾಗದತ್ತ ತೆರಳಿರುವ 21 ಕಾಡಾನೆಗಳು ಮತ್ತೆ ಮೂಡಿಗೆರೆ ಭಾಗದತ್ತ ಮರಳದಂತೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಇಲ್ಲಿಯೇ ಬೀಡುಬಿಟ್ಟಿರುವ ಉಳಿದ ಕಾಡಾನೆಗಳನ್ನು ಕೂಡಲೇ ಕಾಡಿನತ್ತ ಅಟ್ಟುವಂತೆ ರೈತರು ಆಗ್ರಹಿಸಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಕಾಫಿ, ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ನಿರಂತರವಾಗಿ ಹಾನಿಯಾಗುತ್ತಿದ್ದು, ಬೆಳೆಗಾರರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ಸಮಸ್ಯೆ ಮುಂದುವರಿದಿದ್ದರೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಧರಣಿ ಸ್ಥಳದಿಂದ ಕದಲುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದು, ನಾಳೆಯಿಂದ ಆರಂಭವಾಗಲಿರುವ ಅಹೋರಾತ್ರಿ ಹೋರಾಟ ಮಲೆನಾಡಿನಲ್ಲಿ ಮತ್ತೊಂದು ದೊಡ್ಡ ರೈತ ಹೋರಾಟಕ್ಕೆ ಮುನ್ನುಡಿ ಬರೆಯುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!