Saturday, November 28, 2026
Homeಗ್ರೇಟರ್ ಬೆಂಗಳೂರುಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್: ಸಿಎಂ ನಡೆಸಿದ ಸಂಧಾನ ಸಕ್ಸಸ್‌: ₹2,000 ಹೆಚ್ಚಳಕ್ಕೆ ರಾಜ್ಯ ಸರ್ಕಾರ...

ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್: ಸಿಎಂ ನಡೆಸಿದ ಸಂಧಾನ ಸಕ್ಸಸ್‌: ₹2,000 ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ

Telegram Group
Join Now

ಬೆಂಗಳೂರು: ಸಿಎಂ ಡಿ.ಕೆ ಶಿವಕುಮಾರ್‌ ಅವರು ಆಶಾ ಕಾರ್ಯಕರ್ತೆಯರ ಜೊತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ.

ಆಶಾ ಕಾರ್ಯಕರ್ತೆಯರ 12 ದಿನಗಳ ಅಹೋರಾತ್ರಿ ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಸರ್ಕಾರದ ಭರವಸೆಗೆ ಆಶಾ ವರ್ಕರ್ಸ್‌ ಒಪ್ಪಿಗೆ ಸೂಚಿಸಿದ್ದಾರೆ. ಪ್ರತಿ ತಿಂಗಳು ಹೆಚ್ಚುವರಿಯಾಗಿ 2 ಸಾವಿರ ರೂಪಾಯಿ ಗೌರವಧನ ನೀಡುವ ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ವ್ಯಕ್ತಪಡಿಸಿದ್ದಾರೆ.

ಹೆಚ್ಚುವರಿ 2 ಸಾವಿರ ರೂಗಳನ್ನ ಮುಂಬರುವ ಬಜೆಟ್‌ನಲ್ಲಿ ಘೋಷಿಸುವುದಾಗಿ ಸರ್ಕಾರ ಹೇಳಿದೆ. ಇನ್ನು ತಿಂಗಳಿಗೆ 15 ಸಾವಿರ ಗೌರವಧನ ನೀಡಬೇಕೆಂದು ಆಗ್ರಹಿಸಿ 12 ದಿನದಿಂದ ಗುಲಾಬಿ ಪಡೆ ಅಹೋರಾತ್ರಿ ಧರಣಿ ನಡೆಸಿತ್ತು. ಈಗ ಸಿಎಂ ಸಂಧಾನದಿಂದ ಪ್ರತಿಭಟನೆಗೆ ಫುಲ್‌ ಸ್ಟಾಪ್‌ ಬಿದ್ದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!