Monday, August 4, 2025
!-- afp header code starts here -->
Homeರಾಜಕೀಯಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ;  ನಿಮ್ಮ ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋ...

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ;  ನಿಮ್ಮ ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋ ಇದ್ದರೆ ನಿಮ್ಮೇಲೆ ಬೀಳುತ್ತೆ ಕೇಸ್ ; ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಖಡಕ್ ಎಚ್ಚರಿಕೆ

ಬೆಂಗಳೂರು; ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲು ಎಸ್ ಐಟಿ 3 ತಂಡಗಳನ್ನು ರಚನೆ ಮಾಡಿದ್ದು, ಪ್ರಕಟರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಪತ್ತೆ ಲುಕ್    ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ನ್ನು ಕೂಡ ಜಾರಿ ಮಾಡಲಾಗಿದೆ. ಆದರೆ ಇದುವರೆಗೂ ಪ್ರಜ್ವಲ್ ರೇವಣ್ಣ ಮಾತ್ರ ವಿಚಾರಣೆಗೆ ಹಾಜರಾಗಿಲ್ಲ.

ಇದರ ನಡುವೆಯ ರಾಜ್ಯದ ಜನರಿಗೂ ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಅಶ್ಲೀಲ ವಿಡಿಯೋವನ್ನು ನಿಮ್ಮ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದು ಅದನ್ನು ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಯಾವದೇ ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು .ಯಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!