ಹಾಸನ: ಅವಿವಾಹಿತ ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.
ದೀಪಾ (34 ವರ್ಷ) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಚನ್ನರಾಯಪಟ್ಟಣದ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಮಗಳಾದ ದೀಪಾ ಚನ್ನರಾಯಪಟ್ಟಣ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ದೀಪಾ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಏಕಾಏಕಿ ಮಗಳು ಆತ್ಮಹತ್ಯೆಗೆ ಶರಣಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.