ಹಾಸನ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ ಎಂಬಾತನನ್ನು ಇಂದು ಬೆಳಗ್ಗೆ ಎನ್ ಐಎ ಬಂಧಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಎಂಬಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎನ್ ಐಎ ಅರೆಸ್ಟ್ ಮಾಡಿದೆ.
ಎನ್ ಐಎ ಇನ್ಸ್ಪೆಕ್ಟರ್ ಷಣ್ಮುಗಂ ನೇತೃತ್ವದಲ್ಲಿ ಬಂಧನ ಮಾಡಲಾಗಿದ್ದು, ಬಂಧಿತ ಆರೋಪಿಯನ್ನು ಬೆಂಗಳೂರಿನ ಎನ್ಐಎ ಕಚೇರಿಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ