ಆಗುಂಬೆ: ನಿಂತಿರುವ ಟಿಪ್ಪರ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿ ನಡೆದಿದೆ. ಸಲ್ಮಾನ್ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ಈತ ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿ ನಿವಾಸಿ ಎಂದು ತಿಳಿದುಬಂದಿದೆ.

ಇನ್ನು ಘಟನೆಯಲ್ಲಿ ಟಿಪ್ಪರ್ ಡ್ರೈವರ್ ಕೂಡಾ ಗಂಭೀರ ಗಾಯಗೊಂಡಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕ್ಯಾಂಟರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.