ಶಿವಮೊಗ್ಗ: ಆಟೋಗೆ ಕ್ಯಾಂಟರ್ ಹಿಟ್ ಅಂಡ್ ರನ್ ಮಾಡಿದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಗಾನವಿ(17) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನು ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿ ಗಂಭೀರ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಗಾನವಿ ತಾವರೆ ಚಟ್ನಳ್ಳಿಯ ಪೆಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಈಕೆ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿ ಎಂದು ತಿಳಿದುಬಂದಿದೆ. ರಜೆ ಇದ್ದಿದ್ರಿಂದ ಊರಿಗೆ ತೆರಳಿದ್ದ ಗಾನವಿ ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಾಸ್ ಆಗುವಾಗ ಅಪಘಾತ ಸಂಭವಿಸಿದೆ.
ಏಕಾಏಕಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಹಿಂಡ್ ಅಂಡ್ ರನ್ ಮಾಡಿದ ಕ್ಯಾಂಟರ್ ನನ್ನ ಚೀಲೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.