ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಶಾಸಕ ಹೆಚ್ ಡಿ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಜೈಲಿನಂದ ನೇರವಾಗಿ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಎಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಮೊನ್ನೆ ದೇವೇಗೌಡರ ಇದೇ ನಿವಾಸದಿಂದ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಗಳು ವಶಕ್ಕೆ ಪಡೆದಿದ್ದರು.
ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್ ಡಿ ರೇವಣ್ಣ ಅವರಿಗೆ ಶರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತು. ಅದರಂತೆ ಇದೀಗ ಇಂದು ಮಧ್ಯಾಹ್ನ ಶಾಸಕ ಎಚ್ ಡಿ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾದರು.
ಜೈಲಿಂದ ಹೊರಗಡೆ ಬರುತ್ತಿದ್ದಂತೆ ಅವರ ಬೆಂಬಲಿಗರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದರು ಈ ವೇಳೆ ರೇವಣ್ಣ ಅವರ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು ನಂತರ
ರೇವಣ್ಣ ಅವರು ಕಾರಿನಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ತಂದೆ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ತೆರಳಿದ್ದಾರೆ.