ಬಂಟ್ವಾಳ: ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕ ಸಾವನ್ನಪ್ಪಿದ ಘಟನೆ ದ.ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಲ್ಲಿ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.
ಡಿಕ್ಕಿ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ. ಆತನನ್ನ ತಕ್ಷಣ ಆಸ್ಪತ್ರೆಗೆ ಸೇರಿಸಲಾಯ್ತಾದ್ರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇನ್ನು ಅಪಘಾತದಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.