ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಆಟೋ ಪಲ್ಟಿ ಹೊಡೆದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೂರು ಹೋಬಳಿಯ ಮಲೆಮನೆ ಗ್ರಾಮದಲ್ಲಿ ಸಂಭವಿಸಿದೆ.

ಮಲೆಮನೆ ಗ್ರಾಮದ ರವಿ (28) ಮೃತ ದುರ್ದೈವಿ.

ಬಣಕಲ್- ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ರವಿಯನ್ನು ಬಣಕಲ್ ನಿಂದ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾಗುತ್ತಿತ್ತು.

ಆದ್ರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.