ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಸವನಹೊಳೆ ಸಮೀಪ ನಡೆದಿದೆ.

ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಆನಂದಪುರದ ಅರುಣ್ ( 26) ಅಫಘಾತದಲ್ಲಿ ಸಾವನ್ನಪ್ಪಿದ ಯುವಕ.

ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.