ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವೊಂದು ಕೇಳಿಬಂದಿತ್ತು. ಇದೀಗ ಬಿಎಸ್ವೈ ಮೇಲೆ ಆರೋಪ ಮಾಡಿದ್ದ ದೂರುದಾರೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದೂರುದಾರೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ನಿನ್ನೆ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕಳೆದ ಮಾರ್ಚ್ 15ರಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬಿಎಸ್ವೈ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು. ಕಳೆದ ಫೆಬ್ರವರಿ 2ನೇ ತಾರೀಖು, ಯಡಿಯೂರಪ್ಪರ ಮನೆಗೆ ಮಗಳೊಂದಿಗೆ ಸಹಾಯ ಯಾಚಿಸಿ ಹೋದಾಗ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ರು.