Tuesday, August 11, 2026
Homeಕ್ರೈಮ್ಹಾಸನ ಪೆನ್ ಡ್ರೈವ್ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ ಎಸ್...

ಹಾಸನ ಪೆನ್ ಡ್ರೈವ್ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ ಎಸ್ ಐಟಿ ಅಧಿಕಾರಿಗಳು

Telegram Group
Join Now

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ನಿನ್ನೆ ಮಧ್ಯರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಅವರನ್ನು ಎಸ್ ಐಟಿ ಮಹಿಳಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದ್ದರು. ಇಂದು ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಇಂದು ಕೋರ್ಟ್ ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆ ಪ್ರಕ್ರಿಯೆ ನಂತ್ರ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಈ ಕೇಸ್ ಸಂಬಂಧ ವಿಚಾರಣೆ ನಡೆಸಲಿರುವಂತ ನ್ಯಾಯಾಲಯದ ಮುಂದೆ 15 ದಿನಗಳ ಕಾಲ ವಿಚಾರಣೆ ನಡೆಸೋದಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಇನ್ನು ಅಪ್ಡೇಟ್ ಲಭ್ಯವಾಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments