ಹಾಸನ: ಕಳೆದ 25 ವರ್ಷಗಳಿಂದ ಜೆಡಿಎಸ್ ಹಿಡಿತದಲ್ಲಿದ್ದ ಹಾಸನ ಲೋಕಸಭಾ ಕ್ಷೇತ್ರ 25 ವರ್ಷಗಳ ಬಳಿಕ ಇದೀಗ ಕೈ ಪಾಳಯದ ತೆಕ್ಕೆಗೆ ಬಂದಿದೆ. ಕಳೆದ 25 ವರ್ಷಗಳಿಂದ ಜೆಡಿಎಸ್ ಪಕ್ಷದ ಹೊರತಾಗಿ ಬೇರೆ ಯಾರೂ ಸಂಸದರು ಆಗಿರಲಿಲ್ಲ. ಇಂತಹ ಕ್ಷೇತ್ರದಲ್ಲಿ ಜೆಡಿಎಸ್ ಭದ್ರಕೋಟೆಯೀಗ ಛಿದ್ರ ಛಿದ್ರವಾಗಿದೆ.ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 6,64,848 ಮತಗಳನ್ನು ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, 6,21,255 ಮತಗಳನ್ನು ಪಡೆದಿದ್ದರು. ಬರೋಬ್ಬರಿ 43,588 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ.
