ಹಾಸನ: ಭಾರೀ ಮಳೆಗೆ ಕೆಎಸ್ಆರ್ಟಿಸಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಗನಹಳ್ಳಿಯಲ್ಲಿ ನಡೆದಿದೆ.

ಆಲೂರಿನಿಂದ ಪುರಭೈರವನಹಳ್ಳಿ ಮಾರ್ಗದಲ್ಲಿ ಹೋಗ್ತಿದ್ದ ಕೆಎ 13, ಎಫ್ 2103 ನಂಬರಿನ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತಕ್ಕೀಡಾದ ಬಸ್ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್ ನಲ್ಲಿ ಕಳುಹಿಸಲಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.