ಚಿಕ್ಕಮಗಳೂರು : ವೈಟ್‌ಬೋರ್ಡ್ ಬೈಕ್‌ಗಳಲ್ಲಿ ಸಾರ್ವಜನಿಕರನ್ನು ಬಾಡಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿದರು. ಟೌನ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಆಟೋ ಚಾಲಕರು, ದ್ವಿಚಕ್ರ ವಾಹನಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ವೈಟ್ ಬೋರ್ಡ್ ಬೈಕ್ಗಳಿಂದ ಆಟೋ ಚಾಲಕರಿಗೆ ತೊಂದರೆಯಾಗುತ್ತಿದೆ. ಇದರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆಟೋ ಚಾಲಕರ ಜೀವನಕ್ಕೆ ಖಾಸಗಿ ಸಂಸ್ಥೆಗಳಿಂದ ಅಡ್ಡಗಾಲಾಗುತ್ತಿದೆ. ನಮ್ಮ ಹೆಂಡತಿ, ಮಕ್ಕಳು ಉಪವಾಸ ಕೂರುವಂತಾಗಿದೆ ಎಂದು ಅಳಲು ತೋಡಿಕೊಂಡರು.
