ಸುಂಟಿಕೊಪ್ಪ(ಕೊಡಗು) : ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೋಯಿಕೇರಿ ಬಳಿ ನಡೆದಿದೆ. ಸುಂಟಿಕೊಪ್ಪದಿಂದ ಪುತ್ತೂರು ಕಡೆ ಹೋಗುತ್ತಿದ್ದ KSRTC ಬಸ್ ಮತ್ತು ಕೇರಳದ ಕಾಸರಗೋಡುವಿನಿಂದ ಊಟಿಗೆ ತೆರಳುತ್ತಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ತೀವ್ರ ಗಾಯವಾಗಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

