ಚಿಕ್ಕಮಗಳೂರು : ಅರ್ಕಾವತಿ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ನೀಡಿರುವ ವರದಿಯನ್ನು ಬಹಿರಂಗಪಡಿಸುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಿ.ಟಿ. ರವಿ, ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅರ್ಕಾವತಿ ಬಡಾವಣೆಯ 852 ಎಕ್ರೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿದ್ದು, ಈದು 8000 ಕೋಟಿ ರೂ. ಮೊತ್ತದ ಹಗರಣ ಅಂತ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗ್ತಿದೆ. ಈ ಬಗ್ಗೆ ತನಿಖೆ ನಡೆಸಿರುವ ನ್ಯಾಯಮೂರ್ತಿ ಕೆಂಪಣ್ಣ ಅವರ ವರದಿಯನ್ನು ಬಹಿರಂಗ ಪಡಿಸಿ, ತಮ್ಮ ಪಾರದರ್ಶಕತೆಯನ್ನು ಉಳಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.
ಸಿಎಂಗೆ ಬರೆದಿರುವ ಪತ್ರದ ಪ್ರತಿ ಇಲ್ಲಿದೆ ನೋಡಿ

