ನವದೆಹಲಿ : ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ ನೀಡಬಹುದೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ. ಡಿ.ಕೆ. ಶಿವಕುಮಾರ್ ಇತ್ತೀಚೆಗೆ ವೈಷ್ಣೋದೇವಿಗೆ ತೆರಳಿ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ. ಯಾವಾಗಬೇಕಾದ್ರು ಸಿದ್ದರಾಮಯ್ಯ ಕೆಳಗಿಳಿಯಬಹುದು ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನೂ ಶುರುವಾಗಿಲ್ಲ. ಹೊಸದಾಗಿ ಯಾವುದೇ ಯೋಜನಗೆಳನ್ನು ಸರ್ಕಾರ ಅನುಷ್ಠಾನಗೊಳಿಸುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಗೌರವಧನ ಕೊಟ್ಟಿಲ್ಲ. ಕಾನೂನು ಸುವ್ಯವಸ್ಥೆಯ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಆರೋಪಿಸಿದರು.


