ಗೋಣಿಕೊಪ್ಪ(ಕೊಡಗು) : ನಾಗರ ಹೊಳೆ ಉದ್ಯಾನದ ವೀರನಹೊಸಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ.
ಕಿರಂಗೂರು ಗೇಟ್ ಕಾರ್ಯಾಚರಣೆ ವೇಳೆ ರುದ್ರ ಎಂಬಾತನನ್ನು ಅಧಿಕಾರಿಗಳು ಹಿಡಿದಿದು, ರಾಮು ಹಾಗೂ ಅವ್ವು ಎಂಬವರು ತಲೆಮರೆಸಿಕೊಂಡಿದ್ದಾರೆ. ಬಂಧಿತನಿಂದ ಎರಡು ಕೆ.ಜಿ. ಜಿಂಕೆ ಮಾಂಸ, ಜಿಂಕೆ ಚರ್ಮ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಹುಣಸೂರು ವನ್ಯಜೀವಿ ವಿಭಾಗದ RFO ಸುಬ್ರಮಣ್ಯ, ಆನೆಚೌಕೂರು ವಲಯದ DRFO ಶಿವಕುಮಾರ್, ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.



