ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಬಯಲಾಗುತ್ತಿದ್ದಂತೆ ಇದೀಗ ನಟ ದರ್ಶನ್ ಸೇರಿದಂತೆ ಹಲವರನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಕುರಿತಂತೆ ಈಗಾಗಲೇ ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಕೋರ್ಟ್ ಅನುಮತಿಗಾಗಿ ಕಾಯುತ್ತಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಡಿ ಗ್ಯಾಂಗ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಲಿದೆ.

ನಟ ದರ್ಶನ್ ಸೇರಿ ಹಲವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಸಂಬಂಧ ಅಧಿಕೃತ ಆದೇಶಕ್ಕೆ ಜೈಲು ಅಧಿಕಾರಿಗಳು ಕಾಯುತ್ತಿದ್ದಾರೆ. ಈಗಾಗಲೇ ಹಿಂಡಲಗಾ ಜೈಲಿನಲ್ಲಿ ಅಂದೇರಿ ಸೆಲ್ ಗುರುತಿಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್ ಇದರಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಕೋರ್ಟ್ ಅನುಮತಿ ಸಿಕ್ರೆ ಶಿಫ್ಟ್ ಮಾಡಬಹುದು. ಅದಕ್ಕೆ ನಾಲ್ಕೈದು ದಿನ ಕಾಲವಕಾಶ ಬೇಕಾಗುತ್ತದೆ ಎಂದಿದ್ದಾರೆ.

ಇನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಟೋರಿಯಸ್ ಕೈದಿಗಳನ್ನು ಇಡಲು 36 ಕತ್ತಲು ಕೋಣೆಯ ವ್ಯವಸ್ಥೆಯಿದೆ. ಅದರಲ್ಲಿ 15 ಕೋಣೆಗಳು ಖಾಲಿ ಇದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.