Thursday, February 12, 2026
Homebig breakingಡಿಕೆಶಿ ಅಕ್ರಮ ಆಸ್ತಿ ಪ್ರಕರಣ - ಸಿಬಿಐ, ಯತ್ನಾಳ್‌ ಅರ್ಜಿ ವಜಾ - ಚೆಂಡು ಸುಪ್ರೀಂ...

ಡಿಕೆಶಿ ಅಕ್ರಮ ಆಸ್ತಿ ಪ್ರಕರಣ – ಸಿಬಿಐ, ಯತ್ನಾಳ್‌ ಅರ್ಜಿ ವಜಾ – ಚೆಂಡು ಸುಪ್ರೀಂ ಅಂಗಳಕ್ಕೆ ಹಾಕಿದ ಹೈಕೋರ್ಟ್..!

ಪಬ್ಲಿಕ್‌ ಇಂಪ್ಯಾಕ್ಟ್‌ ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಪ್ರಕರಣ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ರಾಜ್ಯ ಮತ್ತು ಕೇಂದ್ರದ ನಡುವಿನ ವಿವಾದವಾಗಿರುವುದರಿಂದ ಸುಪ್ರೀಂ ಇದರ ಬಗ್ಗೆ ತೀರ್ಮಾನ ಮಾಡಲಿ ಅಂತ ಹೇಳಿದೆ.
ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಆದೇಶಿಸಿತ್ತು. ನಂತ್ರ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆದೇಶವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಹೈಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾ. ಕೆ.ಸೋಮಶೇಖರ್‌, ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದು, ಗುರುವಾರ ಸಂಜೆ ಆದೇಶ ಹೊರಬಂದಿದೆ. ಸಿಬಿಐ ಮತ್ತು ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ಇಂಥ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಮಾನಿಸುವುದು ಸೂಕ್ತವಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗಿ ತೀರ್ಮಾನ ಮಾಡಿಕೊಳ್ಳಿ ಅಂತ ದ್ವಿಸದಸ್ಯ ಪೀಠ ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!