Monday, September 28, 2026
Homeಉದ್ಯೋಗಮಂಗಳೂರಿನಲ್ಲಿ ಆಟೋ ಚಾಲಕರ ಬೃಹತ್‌ ಪ್ರತಿಭಟನೆ - ಏತಕ್ಕಾಗಿ ಅನ್ನುವ ಮಾಹಿತಿ ಇಲ್ಲಿದೆ..!

ಮಂಗಳೂರಿನಲ್ಲಿ ಆಟೋ ಚಾಲಕರ ಬೃಹತ್‌ ಪ್ರತಿಭಟನೆ – ಏತಕ್ಕಾಗಿ ಅನ್ನುವ ಮಾಹಿತಿ ಇಲ್ಲಿದೆ..!

Telegram Group
Join Now

ಪಬ್ಲಿಕ್‌ ಇಂಪ್ಯಾಕ್ಟ್‌ ಮಂಗಳೂರು : ಇಲೆಕ್ಟಿಕಲ್‌ ಅಟೋ ರಿಕ್ಷಾಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಮಂಗಳೂರಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಮೆರವಣಿಗೆ, ಪ್ರತಿಭಟನಾ ಸಭೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲೀಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್‌ವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸಿದರು. ಬಳಿಕ ಜಿಲ್ಲಾಡಳಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!