ಶಿವಮೊಗ್ಗ : ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಅವೈಜ್ಞಾನಿಕ ಯೋಜನೆ ಕೈ ಬಿಡಲು ಆಗ್ರಹಿಸಿ ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಟನೆ ನಡೆಸಿತು.
ಶಿವಮೊಗ್ಗದಿಂದ ಬೆಂಗಳೂರಿಗೆ 400 ಕಿ.ಮೀ. ಆಗುತ್ತದೆ. ಇಷ್ಟು ದೂರ ನೀರು ಒಯ್ಯುವುದು ವೈಜ್ಞಾನಿಕವಲ್ಲ. ದಟ್ಟ ಕಾಡಿನ ನಡುವೆ 350 ಎಕರೆ ಜಾಗದಲ್ಲಿ ಪಂಪ್ಡ್ ಸ್ಟೋರೇಜ್ ಮಾಡಿ ವಿದ್ಯುತ್ ಉತ್ಪಾದನೆ ಸಾಧುವಲ್ಲ. ಇಂತಹ ಯೋಜನೆ ಪ್ರಪಂಚದ ಯಾವುದೇ ಮೂಲೆಯಲ್ಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಮಲೆನಾಡಿನ ಹಳ್ಳಿಗಳಿಗೆ ಬೇಸಿಗೆಯಲ್ಲಿ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ನೀರು ಪೂರೈಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಪ್ರಮುಖರು, ಇದೊಂದು ಹಾಸ್ಯಾಸ್ಪದ ಯೋಜನೆ. ಶರಾವತಿ ನದಿಯ ಅಪಹರಣವಾದಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಕೂಡಲೇ ಸರ್ಕಾರ ಈ ಯೋಜನೆ ಕೈ ಬಿಡಬೇಕು ಎಂದು ಆಗ್ರಹಿಸಿದರು.




